ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.

HAL Recruitment 2022: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಫೈಯರ್ ಮ್ಯಾನ್​, ಸೆಕ್ಯೂರಿಟಿ ಗಾರ್ಡ್​ ಹುದ್ದೆಗಳೂ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್​ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ

ಸಂಸ್ಥೆ

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್

ಹುದ್ದೆಯ ಹೆಸರು

ಫೈಯರ್ ಮ್ಯಾನ್​, ಸೆಕ್ಯೂರಿಟಿ ಗಾರ್ಡ್

ಒಟ್ಟು ಹುದ್ದೆ

22

ವಿದ್ಯಾರ್ಹತೆ

10th, ಪಿಯುಸಿ

ವೇತನ

ಮಾಸಿಕ ₹ 21,000

ಸ್ಥಳ

ತುಮಕೂರು

ಅರ್ಜಿ ಸಲ್ಲಿಕೆ ಬಗೆ

ಆನ್​ಲೈನ್​

ಅರ್ಜಿ ಸಲ್ಲಿಸಲು ಕೊನೆ ದಿನ

16/11/2022

ಅರ್ಜಿ ಸಲ್ಲಿಸುವ ಲಿಂಕ್

ಇಲ್ಲಿ ಕ್ಲಿಕ್ ಮಾಡಿ

ಹುದ್ದೆಯ ಮಾಹಿತಿ:

ಫೈಯರ್​ಮ್ಯಾನ್​- 10

ಸೆಕ್ಯುರಿಟಿ ಗಾರ್ಡ್​​-12

ವಿದ್ಯಾರ್ಹತೆ:

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಒಬಿಸಿ(ಎನ್​ಸಿಎಲ್​) ಅಭ್ಯರ್ಥಿಗಳು- 3 ವರ್ಷ

ಎಸ್​ಸಿ/ಎಸ್​ಟಿ ಅಭ್ಯರ್ಥಿಗಳು-5 ವರ್ಷ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ದೈಹಿಕ ಪರೀಕ್ಷೆ

ದಾಖಲಾತಿ ಪರಿಶೀಲನೆ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022

ಅರ್ಜಿ ಸಲ್ಲಿಸಲು ಕೊನೆಯ ದಿನ: 16/11/2022