ನಂದಿನಿ ಹಾಲಿನ ದರದಲ್ಲಿ ಏರಿಕೆ. ಮಂಗಳವಾರದಿಂದಲೇ ನೂತನ ದರ ಜಾರಿ. ನ.20 ರಂದು ಕೆಎಂಎಫ್ ಅಧ್ಯಕ್ಷ ಹಾಗೂ ಅಧಿಕಾರಿಗಳನ್ನು ಕರೆದು ಸಭೆ ನಡೆಸಿ, ರೈತರಿಗೆ ಅನುಕೂಲವಾಗುವಂತೆ, ಗ್ರಾಹಕರಿಗೆ ಹೊರೆಯಾಗದಂತೆ ಅಂತಿಮ ನಿರ್ಧಾರಕ್ಕೆ ಬರುವುದಾಗಿ ತಿಳಿಸಿದರು.

ಬೆಂಗಳೂರು:ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಹೆಚ್ಚಳ ಮಾಡಿ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ ನೀಡಿದೆ. ನಾಳೆಯಿಂದಲೇ ಜಾರಿಗೆ ಬರುವಂತೆ ಪ್ರತಿ ಲೀಟರ್ಗೆ 3 ರೂಪಾಯಿ ಏರಿಕೆ ಮಾಡಿದೆ.

ಟೋನ್ಡ್ ಹಾಲಿನ ದರ ಪ್ರತಿ ಲೀಟರ್​ಗೆ 37 ರಿಂದ 40 ರೂ, ಸ್ಪೆಷಲ್ ಹಾಲಿನ ದರ 43 ರಿಂದ 46 ರೂಪಾಯಿ, ಶುಭಂ ಹಾಲಿನ ದರ 43 ರಿಂದ 46 ರೂ, ಸಮೃದ್ಧಿ ಹಾಲಿನ ದರ 48 ರಿಂದ 51 ರೂ ಹಾಗೂ ಮೊಸರಿನ ದರ 45 ರಿಂದ 48 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ನಂದಿನಿ ಹಾಲು, ಮೊಸರಿನ ದರದಲ್ಲಿ ಏರಿಕೆ

ಹಾಲು, ಮೊಸರು ದರದಲ್ಲಿ ತಲಾ 3 ರೂಪಾಯಿ ಹೆಚ್ಚಳ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬರಲಿದೆ. ಹೆಚ್ಚಳ ಮಾಡಲಾದ ದರವನ್ನು ಪ್ರೋತ್ಸಾಹ ಧನದ ರೂಪದಲ್ಲಿ ರೈತರಿಗೆ ವರ್ಗಾವಣೆ ಮಾಡಲಾಗುವುದು ಎಂದು ಕೆಎಂಫ್​​ ಹೇಳಿದೆ.