ಮೆದುಳು ಜ್ವರದ ವ್ಯಾಕ್ಸಿನ್ ಪಡೆದು 10 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಎರಡು ಶಾಲೆಗಳಲ್ಲಿ ಪ್ರತ್ಯೇಕವಾಗಿ ಘಟನೆ ನಡೆದಿದೆ.

ತುಮಕೂರು: ಮೆದುಳು ಜ್ವರದ ವ್ಯಾಕ್ಸಿನ್  ಪಡೆದು 10 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಎರಡು ಶಾಲೆಗಳಲ್ಲಿ ಪ್ರತ್ಯೇಕವಾಗಿ ನಡೆದಿದೆ. ತಿಪಟೂರು ತಾಲ್ಲೂಕಿನ ಗುರುಗದಹಳ್ಳಿ ಸರ್ಕಾರಿ ಪ್ರೌಡಶಾಲೆಯಲ್ಲಿ 8 ವಿದ್ಯಾರ್ಥಿಗಳು ಹಾಗೂ ಅದೇ ತಾಲ್ಲೂಕಿನ ನಗರದ ಸರ್ಕಾರಿ ಬಾಲಕೀಯರ ಪ್ರೌಡಶಾಲೆಯ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡೂ ಶಾಲೆಗಳಲ್ಲಿ ಮೆದುಳು ಜ್ವರದ ಜೆಇ ವ್ಯಾಕ್ಸಿನ್ನನ್ನು ವಿದ್ಯಾರ್ಥಿಗಳು ಪಡೆದುಕೊಂಡಿದ್ದರು. ಬಳಿಕ ತಲೆ ಸುತ್ತು ಬಂದು ಅಸ್ವಸ್ಥಗೊಂಡಿದ್ದಾರೆ. ಆಸ್ಪತ್ರೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲಾ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.