ಹಾಸನ – ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಾಗೂ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿಗಳಾದ ಅರ್ಚನಾ M.S. ರವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ 8 ತಾಲ್ಲೂಕಿನ 38 ಹಳ್ಳಿಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ವಾಹನ 3 ದಿನ ದಿನಗಳ ಕಾಲ ಸಂಚರಿಸಲಿದೆ ಎಂದರು.

ವಾಹನಗಳಲ್ಲಿ ಬ್ಯಾನರ್ ಮತ್ತು ಎಲ್ ಇ ಡಿ ಪರದೆಯ ಮೂಲಕ ಸಂಚಾರಿ ನಿಯಮ ಪಾಲನೆಯ ಸಾಕ್ಷ್ಯ ಚಿತ್ರಗಳನ್ನು ನಿಗದಿತ ಗ್ರಾಮಗಳ ಜನನಿಬಿಡ ಪ್ರದೇಶದಲ್ಲಿ ಪ್ರಚಾರ ಮಾಡುವ ಮೂಲಕ ಸಂಚಾರಿ ನಿಯಮ ಪಾಲನೆಯ ಅರಿವು ಮೂಡಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ನಿರ್ದೇಶಕ ವಿನೋದ್ ಚಂದ್ರ ಹಾಗೂ ಮತ್ತಿತರರು ಭಾಗಿಯಾಗಿದ್ದರು.