ತುಮಕೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಂಚೂಣಿಯಲ್ಲಿರುವ ಸೂರ್ಯ ಮುಕುಂದರಾಜ್ ಮೂಲತಃ ತುಮಕೂರು ತಾಲ್ಲೂಕು ನಾಗವಲ್ಲಿ ಪಕ್ಕದ ಲಕ್ಕೇನಹಳ್ಳಿ ಗ್ರಾಮದವರು

ಸೂರ್ಯ ಮುಕುಂದರಾಜ್ ಕಾಂಗ್ರೆಸ್ ನಲ್ಲಿ ರಾಜ್ಯಮಟ್ಟದಲ್ಲಿ ಗುರ್ತಿಸಿಕೊಂಡಿರುವ ನಿಷ್ಠಾವಂತ ಯುವ ನಾಯಕ, ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣಕರ್ತ ಸೂರ್ಯ

ವಕೀಲರಾಗಿ, ಪತ್ರಕರ್ತರಾಗಿ ಕೆಳವರ್ಗದ ಜನರ ಪರವಾಗಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಸೂರ್ಯ ಮುಕುಂದರಾಜ್ ತನ್ನ ತವರು ನೆಲದಲ್ಲಿ ರಾಜಕೀಯ ಜೀವನ ಆರಂಭಿಸಿದ್ದಾರೆ

2023ರ ವಿಧಾನಸಭಾ ಚುನಾವಣೆಗೆ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲು ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಸಲ್ಲಿಸಿರುವ ಸೂರ್ಯ ಮುಕುಂದರಾಜ್, ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾಗಿ ಗ್ರಾಮಾಂತರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ