ಮೈಸೂರು: ಬಿಜೆಪಿಯಲ್ಲಿ ಸಕ್ರಿಯನಾಗಿಲ್ಲ. ಅಕ್ರಮವಾಗಿದ್ದೇನೆ. ಬಿಜೆಪಿ (BJP) ಅವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು ಎಂದು ಸ್ವಪಕ್ಷದ ವಿರುದ್ಧವೇ ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ (Sandesh Nagaraj) ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಪಕ್ಷದ ವಿರುದ್ಧವೇ ಕಿಡಿಕಾರಿದರು. ಅನ್ಯಾಯ ಮಾಡುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು. ಬಿಜೆಪಿಯವರು ಹೆಚ್. ವಿಶ್ವನಾಥ್‌ಗೆ ಅನ್ಯಾಯ ಮಾಡಿದರು. ನನಗೂ ಅನ್ಯಾಯ ಮಾಡಿದರು. ಮೋಸ ಮಾಡುವುದರಲ್ಲಿ ಬಿಜೆಪಿ ಅವರು ನಂಬರ್ ಓನ್ ಆಗಿದ್ದು, ಬಿಜೆಪಿ ಸಹವಾಸ ನನಗೆ ಇನ್ನೂ ಸಾಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ (Congress) ಸೇರಲು ನಿರ್ಧರಿಸಿದ್ದೇನೆ. ಈ ಕುರಿತಾಗಿ ಸಿದ್ದರಾಮಯ್ಯ ಅವರ ಜೊತೆ ಮಾತಾಡಿದ್ದೇನೆ. ಡಿ.ಕೆ. ಶಿವಕುಮಾರ್ ಅವರ ಜೊತೆಯೂ ಮಾತಾಡುತ್ತೇನೆ ಎಂದು ತಿಳಿಸಿದರು