ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಜೋಗಿ ಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಜೋಗಿ ಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಜೋಗಿ ಹಳ್ಳಿ ಬಳಿ ಸೇತುವೆಗೆ ಡಿಕ್ಕಿ ಹೊಡೆದು, ಸುಮಾರು 10 ಅಡಿ ಕಂದಕಕ್ಕೆ ಉರುಳಿಬಿದ್ದಿದೆ. ಕಾರಿನಲ್ಲಿ ಚಾಲಕ ಸೇರಿ ಐವರು ಪ್ರಯಾಣಿಸುತ್ತಿದ್ದರು. ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ