ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಕಾಂಗ್ರೆಸ್ (Congress) ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಅವರ ತಂಗಿ ರಂಜಿತಾ ಎಸ್‌. ಚಿಕ್ಕಮಾದು  (Ranjita S Chikkamadu) ಇಂದು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಜೆಡಿಎಸ್ (JDS) ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. 

ರಂಜಿತಾ ಮಾಜಿ ಶಾಸಕ ದಿವಂಗತ ಚಿಕ್ಕಮಾದು ಅವರ ಪುತ್ರಿ. ಚಿಕ್ಕಮಾದು ಅವರು ಈ ಹಿಂದೆ ಜೆಡಿಎಸ್‌ನಲ್ಲಿದ್ದರು. ನಂತರ ಪುತ್ರ ಅನಿಲ್ ಚಿಕ್ಕಮಾದು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾದರು. ಆದರೀಗ ಅಣ್ಣ ಕಾಂಗ್ರೆಸ್‌ನಲ್ಲಿದ್ದರೆ ತಂಗಿ ರಂಜಿತಾ ಅಭಿಮುಖವಾಗಿ ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. 

ಕೆಲ ದಿನಗಳ ಹಿಂದೆಯಷ್ಟೇ ಹುಣಸೂರು ಶಾಸಕ ಹೆಚ್.ಪಿ ಮಂಜುನಾಥ್ (HP Manjunath) ಅವರೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಂಜಿತಾ ಇದೀಗ ಜಿ.ಟಿ.ದೇವೇಗೌಡ ಅವರ ಪುತ್ರ ಜಿ.ಡಿ ಹರೀಶ್‌ಗೌಡ (GD Harish Gowda) ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಬೆಂಬಲ ಹರೀಶ್‌ಗೌಡ ಅವರಿಗೆ ಎಂದು ಘೋಷಣೆ ಮಾಡಿದ್ದಾರೆ