ರಾಜಕಾರಣಿಗಳ ಮಕ್ಕಳು ಐಷಾರಾಮಿ ಕಾರುಗಳಲ್ಲಿ ಓಡಾಡುವುದು ಸಾಮಾನ್ಯ. ಆದರೆ ರಾಜಕಾರಣಿಯ ಪುತ್ರನದ್ದು ಎನ್ನಲಾದ ಲ್ಯಾಂಬೋರ್ಗಿನಿ ಕಾರು ರಸ್ತೆ ಪಕ್ಕದಲ್ಲಿ ಪಾರ್ಕಿಂಗ್ ಮಾಡಿದ್ದ ಆಟೋಗೆ ಡಿಕ್ಕಿ ಹೊಡೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆ ರಾಜಕಾರಣಿ ಯಾರು ಎಂಬುದು ತಿಳಿದು ಬಂದಿಲ್ಲ. ಆಟೋಗೆ ಲ್ಯಾಂಬೋರ್ಗಿನಿ ಡಿಕ್ಕಿಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕಾಲೇಶ್ ಎಂಬುವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ