ತುಮಕೂರಿನಲ್ಲಿ ಅಪಘಾತಗಳ ಸರಮಾಲೆ ಮುಂದುವರಿದಿದ್ದು, ಟಿವಿಎಸ್ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ.

ತುಮಕೂರು: ತುಮಕೂರಿನಲ್ಲಿ ಅಪಘಾತಗಳ ಸರಮಾಲೆ ಮುಂದುವರಿದಿದ್ದು, ಟಿವಿಎಸ್ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ.

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಆನೆಮಳೆ ಗೇಟ್ ಬಳಿ ಘಟನೆ ನಡೆದಿದೆ. ಮಗು ಸೇರಿದಂತೆ ಒಟ್ಟು ಮೂವರು ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ನಿಂಗಪ್ಪ (65) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 9 ತಿಂಗಳ ಹೆಣ್ಣು ಮಗು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವಿಗೀಡಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಗೆ ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುರುವೇಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ