ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.

ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು