ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕೂಳೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿ ಆರಂಭವಾಗಿದ್ದು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಇದೀಗ ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ಸಂಚಾರ ಬಂದ್‌ ಮಾಡಿರುವುದರಿಂದ ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಸಂಭವಿಸಿದೆ. ವಾಹನ ಸಂಚಾರಕ್ಕೆ ಸೇತುವೆಯ ಒಂದು ಕಡೆಯಲ್ಲಿ ಅನುವು ನೀಡಿದ್ದರೂ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.

ನಿಗದಿತ ಸಮಯದವೆರೆಗೆ ಬೆಳಗ್ಗೆ 6ರಿಂದ 11ರ ವೆರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ10ರ ಅವಧಿಯಲ್ಲಿ ಉಡುಪಿ ಕಡೆಯಿಂದ ಕೇರಳಕ್ಕೆ ಸಂಚರಿಸುವ ಭಾರಿ ವಾಹನಗಳು ಮೂಲ್ಕಿ-ಸುರತ್ಕಲ್-ಎಂಆರ್‌ಪಿಎಲ್ – ಬಜಪೆ-ಕೆಪಿಟಿ-ನಂತೂರು ಮಾರ್ಗವಾಗಿ ಹಾಗೂ ಉಡುಪಿ ಕಡೆಯಿಂದ ಬೆಂಗಳೂರು ಸಂಚರಿಸುವ ವಾಹನಗಳು ಉಡುಪಿ-ಮೂಲ್ಕಿ-ಮೂಡಬಿದಿರೆ-ಬಂಟ್ವಾಳ ಮಾರ್ಗವಾಗಿ ಸಂಚರಿಸಬೇಕು ಎಂದು ಆದೇಶ ನೀಡಲಾಗಿದೆ